ಬಜಗೋಳಿ : ಗಾಂಜಾ ಸೇವನೆ – ಪ್ರಕರಣ ದಾಖಲು

ಕಾರ್ಕಳ: ಬಜಗೋಳಿ ಪೇಟೆಯಲ್ಲಿ ನಸುಕಿನ ಹೊತ್ತು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಈ ಪೈಕಿ ಇಬ್ಬರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಸುಭಾಶ್ಚಂದ್ರ ಕಾಮತ್ ಸಿಬ್ಬಂದಿಯೊಂದಿಗೆ ಜು. 25ರಂದು ನಸುಕಿನ ಜಾವ 3.30ಕ್ಕೆ ಗಸ್ತು ಕರ್ತವ್ಯದಲ್ಲಿರುವಾಗ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ತಂದು ವಿಚಾರಣೆಗೊಳಪಡಿಸದಾಗ ಅವರು ಅಮಲಿನಲ್ಲಿರುವಂತೆ ಕಂಡುಬಂತು. ಈ ಹಿನ್ನೆಲೆಯಲ್ಲಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮೂವರ ಪೈಕಿ ಅಬ್ದುಲ್ ಸಮದ್ ಹಾಗೂ ಅಬ್ದುಲ್ ರೆಹಮಾನ್ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























































































































error: Content is protected !!
Scroll to Top