ಕಡಬ : ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿಯಲ್ಲಿ ನಡೆದಿದೆ. ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ರವರ ಸಹಕಾರದಿಂದ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.






























































