ಕಾರ್ಕಳ : ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದು ವಿದ್ಯಾರ್ಥಿನಿಯರ ವೀಡಿಯೋ ಶೂಟಿಂಗ್ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು ಇದರ ಹಿಂದೆ ದೊಡ್ಡ ಷಡ್ಯಂತ್ರವಿರುವ ಗುಮಾನಿ ಇರುವುದರಿಂದ ಯಾವುದೇ ಕಾರಣಕ್ಕೂ ಸರಕಾರ ಮತ್ತು ಜಿಲ್ಲಾಡಳಿತ ಹಗುರವಾಗಿ ಪರಿಗಣಿಸಬಾರದು.
ಹಿಜಾಬ್ ಗಲಬೆ ಎಬ್ಬಿಸಿದ ಸರಕಾರಿ ಕಾಲೇಜು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ತನಕ ಹೋಗಿದ್ದಾರೆ ಎಂದರೆ ಅವರ ವಿರುದ್ಧ ವ್ಯವಸ್ಥಿತವಾದ ಸಂಘಟನೆ ಇದೆ ಎನ್ನುವುದು ಸ್ಪಷ್ಟ. ಅದೇ ರೀತಿ ವೀಡಿಯೋ ಮಾಡಿದ ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕೈವಾಡವಿರುವ ಬಲವಾದ ಅನುಮಾನವಿದೆ. ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಿಸಿದರಷ್ಟೇ ಸಾಲದು ಅವರಿಗೆ ಕುಮ್ಮಕ್ಕು ನೀಡಿದವರನ್ನು ಬಯಲಿಗೆ ತರಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ವೀಡಿಯೋ ಶೂಟಿಂಗ್‌ಗೆ ಕುಮ್ಮಕ್ಕು ನೀಡಿದವರನ್ನು ಬಯಲಿಗೆಳೆಯಿರಿ : ಸುನಿಲ್ ಕುಮಾರ್




















