ಬೆಂಗಳೂರು : ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಇಂದು ಉಚ್ಛ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಚುನಾವಣಾ ತಕರಾರು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ.
ಸಿಎಂ ಸಿದ್ದರಾಮಯ್ಯ ಅವರ ಶಾಸಕತ್ವವನ್ನು ಅಸಿಂಧುಗೊಳಿಸಬೇಕು ಎಂದು ಕೆ.ಎಂ. ಶಂಕರ್ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ಬಾರಿ ನಡೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123 (1) ಪ್ರಕಾರ ಈ ರೀತಿ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರ್ಟ್ಗೆ ಅರ್ಜಿದಾರರು ಮನವಿ ಮಾಡಿದ್ದರು.






































