ಹೆಬ್ರಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಹೆಬ್ರಿ : ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಪುರದಲ್ಲಿ ಜು. 26 ರಂದು ಸಂಭವಿಸಿದೆ. ರಂಗನಾಥ ಶೆಟ್ಟಿ (33) ಎಂಬವರೇ ನೇಣಿಗೆ ಶರಣಾದವರು. ಇವರು ಹಿರಿಯಡ್ಕ ಸೌಹಾರ್ದ ಸೊಸೈಟಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬುಧವಾರದಂದು ಶಿವಪುರ ಮೇಲ್‌ ಮುಕ್ಕಾಣಿ ಎಂಬಲ್ಲಿರುವ ಸರಕಾರಿ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟವರು ವಾಪಸ್ಸಾಗಿಲ್ಲ. ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿರುತ್ತದೆ. ಯಾವುದೋ ವಿಚಾರಕ್ಕೆ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











































































error: Content is protected !!
Scroll to Top