ಉಡುಪಿ ವೀಡಿಯೋ ಪ್ರಕರಣ : ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ : ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಆದೇಶಿಸಿದೆ.
ಆರೋಪಿ ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಮೂವರು ವಿದ್ಯಾರ್ಥಿನಿಯರು ಜು. 28 ರಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು. ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿ ಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಶರತುಗಳನ್ನು ನ್ಯಾಯಾಲಯ ವಿಧಿಸಿದೆ.













































































error: Content is protected !!
Scroll to Top