ಕಾಂಗ್ರೆಸ್ ಸರಕಾರ ಬಂದರೆ ಅನಾಚಾರ ಎಂದು ಆರೋಪ
ಉಡುಪಿ: ಕಾಲೇಜು ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ಪ್ರಕರಣದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು, ಸತ್ಯವನ್ನು ಬಹಿರಂಗಪಡಿಸಲು ತಾಂತ್ರಿಕ ತನಿಖೆಯ ಅಗತ್ಯವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಘಟನೆ ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ನನ್ನ ಕ್ಷೇತ್ರದ ವಿದ್ಯಾರ್ಥಿಗಳ ಹಿತ ಕಾಪಾಡುವುದು ಮತ್ತು ಈ ಅವರಿಗೆ ನ್ಯಾಯ ಸಿಗುವಂತೆ ಮಾಡಲು ಬೆಂಬಲ ನೀಡುವುದು ಅಗತ್ಯ ಎಂದು ಹೇಳಿದರು.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಏನಾಗಬಹುದು ಎಂದು ನಾವು ಹಿಂದೆಯೇ ಹೇಳಿದ್ದೆವು. ಅದನ್ನೇ ನಾವು ಕಣ್ಣಮುಂದೆ ನೋಡುತ್ತಿದ್ದೇವೆ ಎಂದ ಅವರು, ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಘಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳನ್ನು ಕೇವಲ ಪ್ರಶ್ನಿಸುವ ಬದಲು, ಸತ್ಯವನ್ನು ಕಂಡುಕೊಳ್ಳಲು ಸಂಪೂರ್ಣ ತಾಂತ್ರಿಕ ತನಿಖೆ ನಡೆಸಬೇಕು.ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.














































































