ಚೆಸ್‌ ಪಂದ್ಯಾಟ : ಜೇಸೀಸ್ ಶಾಲೆಯ ಮೂರು ವಿದ್ಯಾರ್ಥಿನಿಯರು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಜು. 28 ರಂದು ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಮೂರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ಆರುಷಿ, ಏಳನೇ ತರಗತಿಯ ಶಿವಾನಿ ಕುಡ್ವ ಹಾಗೂ ಶಾರ್ವಿ ಹೆಗ್ಡೆ ಆಯ್ಕೆಯಾದ ವಿದ್ಯಾರ್ಥಿಗಳು. ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕ ಪ್ರತಾಪ್ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.































































































































































error: Content is protected !!
Scroll to Top