ಮಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೋ. ಕೆ. ಭೈರಪ್ಪ ನಿಧನ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ. ಕೆ. ಬೈರಪ್ಪ (69) ಅವರು ಜು. 31 ರಂದು ಬೆಳಿಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ.

ಬೈರಪ್ಪ ಅವರು 2014 ಜೂನ್‌ ನಿಂದ 2019 ರವರೆಗೆ ಮಂಗಳೂರು ವಿವಿಯ ಎಂಟನೇ ಕುಲಪತಿಯಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ನಂತರ ಆದಿ ಚುಂಚನಗಿರಿಯಲ್ಲಿ ಸಹ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು.

ಮೂಲತಃ ಮೈಸೂರಿನವರಾದ ಪ್ರೊ. ಬೈರಪ್ಪ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಹಾಗೂ ರಶ್ಯದ ಮಾಸ್ಕೋ ಸ್ಟೇಟ್ ಯುನಿವರ್ಸಿಟಿಯಿಂದ ಪಿ.ಎಚ್.ಡಿ. ಪದವಿಯನ್ನು ಪಡೆದು, ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2017-18ರ ಅವಧಿಯಲ್ಲಿ ಸರ್ ಸಿ.ವಿ.ರಾಮನ್ ಜನ್ಮ ಶತಮಾನೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.





























































































































error: Content is protected !!
Scroll to Top