ಕಾರ್ಕಳ ಕೆನರಾ ಬ್ಯಾಂಕ್ ನಲ್ಲಿ ಬೆಂಕಿ ಅವಘಡ – ತಪ್ಪಿದ ಭಾರಿ ಅನಾಹುತ

ಕಾರ್ಕಳ : ನಗರದ ಬಸ್‌ ನಿಲ್ದಾಣ ಸಮೀಪದಲ್ಲಿನ ಕೆನರಾ ಬ್ಯಾಂಕ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆ. 3ರ ಬೆಳಿಗ್ಗೆ ಸಂಭವಿಸಿದೆ. ತಕ್ಷಣವೇ ಬ್ಯಾಂಕ್ ಸಿಬ್ಬಂದಿ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಕಾಲಿನ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಿಬ್ಬಂದಿ ರವೀಂದ್ರ , ರೂಪೇಶ್, ಹರಿಪ್ರಸಾದ್, ಕೇಶವ್, ಹಸನ್ ಹಾಗೂ ರವಿಚಂದ್ರ ಪಾಲ್ಗೊಂಡಿದ್ದರು.



















































































error: Content is protected !!
Scroll to Top