ಚೆಸ್‌ – ಕರಾಟೆ : ಜ್ಞಾನಸುಧಾ ವಿದ್ಯಾರ್ಥಿಗಳ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಮನ್ವಿತ್ ಮತ್ತು ಜೇಷ್ಠ ನಾಯಕ್ (7ನೇ ತರಗತಿ), ಶೋಧನ್ ವರ್ಮ ಮತ್ತು ಮಿಶಲ್ ಅಸಾದಿ (9ನೇ ತರಗತಿ), ದಿಶಾ ಯು. (10ನೇ ತರಗತಿ) ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜ್ಞಾನಸುಧಾದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಸಂಚಿತ್ ಜಿ. ಶೆಟ್ಟಿ, ಹಿಮಾನಿ ಶೆಟ್ಟಿ, ಕಾರ್ತಿಕ್, ದೈವಿಕ್ (8ನೇ ತರಗತಿ), ಪ್ರಣಯ್ ಪಿ. ಶೆಟ್ಟಿ (10ನೇ ತರಗತಿ) ಹಾಗೂ ಶ್ರೀಫಲ್ ಶೆಟ್ಟಿ (6ನೇ ತರಗತಿ) ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಸಂಸ್ಥೆಗಳ ಸಿಇಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಉಷಾ ರಾವ್ ಯು. ವಾಣಿ ಕೆ. ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

ಉದ್ಘಾಟನೆ ‌
ಕುಕ್ಕುಂದೂರು ಗ್ರಾ.ಪಂ. ಅಧ್ಯಕ್ಷೆ ಶಶಿಮಣಿ ಸಂಪತ್‌ ಅವರು ದೀಪ ಬೆಳಗಿಸಿ ಕರಾಟೆ ಪಂದ್ಯಾಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪಂದ್ಯಾಟದಲ್ಲಿ ಸೋಲು ಗೆಲುವು ಸಾಮಾನ್ಯ. ಕ್ರೀಡಾ ಸ್ಫೂರ್ತಿ, ಕ್ರೀಡಾ ಮನೋಭಾವದಿಂದ ಭಾಗವಹಿಸುವುದು ಮುಖ್ಯವೆಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಚಂದ್ರಯ್ಯ, ದೈಹಿಕ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಶುಭ ಹಾರೈಸಿದರು. ಕಾರ್ಕಳ ಜ್ಞಾನಸುಧಾ ಸಂಸ್ಥೆಗಳ ಸಿಇಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಅಧ್ಯಕ್ಷತೆ ವಹಿಸಿದ್ದರು.

ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಕುಂದಾಪುರ, ಸಂಘದ ಪ್ರಧಾನ ಕಾರ್ಯದರ್ಶಿ ಲೋಹಿತಾಶ್ವ, ರಾಜ್ಯ ಕರಾಟೆ ಶಿಕ್ಷಕರ ಸಂಘದ ಕೋಶಾಧಿಕಾರಿ ರವಿ ಸಾಲಿಯಾನ್, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹ ಮುಖ್ಯಶಿಕ್ಷಕಿ ವಾಣಿ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲೆಯ ಮುಖ್ಯಶಿಕ್ಷಕಿ ಉಷಾ ರಾವ್ ಯು. ಸ್ವಾಗತಿಸಿ, ಸಹಶಿಕ್ಷಕಿಯಾದ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್ ವಂದಿಸಿದರು.

ಚೆಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ತಂಡ
















































error: Content is protected !!
Scroll to Top