ಕರ್ನಾಟಕ ಪೊಲೀಸರನ್ನು ಬಂಧಿಸಿದ ಕೇರಳ ಪೊಲೀಸರು

ಬೆಂಗಳೂರು : ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಲ್ಲಿ‌ ಕೇರಳದ ಪೊಲೀಸರು ವಶಕ್ಕೆ ಪಡೆದು ಎಫ್‌ಐಆರ್‌ ದಾಖಲಿಸಿದ್ದಾರೆ. ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ಪೆಕ್ಟರ್ ಶಿವಪ್ರಕಾಶ್, ಸಿಬ್ಬಂದಿ ವಿಜಯ್‌ಕುಮಾರ್ ಎಚ್‌.ಸಿ., ಶಿವನಿ ಎಚ್‌.ಸಿ. ಹಾಗೂ ಸಂದೇಶ್ ಬಂಧಿತ ಪೊಲೀಸ್‌ ಅಧಿಕಾರಿಗಳು ಎಂದು ತಿಳಿದು ಬಂದಿದೆ.

ಮೊದಲಿಗೆ ಮಡಿಕೇರಿಯ ಆರೋಪಿ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಅಲ್ಲಿ ನೌಶಾದ್ ಎಂಬುವನಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ನೌಶಾದ್ ಬಳಿ 3 ಲಕ್ಷ ಬೇಡಿಕೆ ಆರೋಪ
ಕರ್ನಾಟಕದಿಂದ ಕೇರಳಕ್ಕೆ ತೆರಳಿದ್ದ ಪೊಲೀಸರಿಗೆ ಆರೋಪಿ ನೌಶಾದ್​ ಸಿಕ್ಕಿದ್ದ. ಈ ವೇಳೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಕೃತ್ಯ ಮುಚ್ಚಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಮುಂಗಡವಾಗಿ 3.95 ಲಕ್ಚ ಹಣವನ್ನ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ಆರೋಪಿ ನೌಶಾದ್ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಬಳಿಕ ಬೆಂಗಳೂರು ಪೊಲೀಸರು ನಾವು ಪ್ರಕರಣವೊಂದರ ತನಿಖೆಗೆ ಬಂದಿರುವುದಾಗಿ ತಿಳಿಸಿದ್ದರು. ಹೀಗಿದ್ದರೂ ಕಲ್ಲಂಚೇರಿ ಪೊಲೀಸರು ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು, ನಿನ್ನೆಯೇ ಎಫ್​ಐಆರ್ ದಾಖಲು ಮಾಡಿದ್ದರು. ಸದ್ಯಕ್ಕೆ ಕಲ್ಲಂಚೇರಿ ಪೊಲೀಸರು ವಶದಲ್ಲಿ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಇಬ್ಬರು ಸಿಬ್ಬಂದಿ ಇದ್ದಾರೆ.







































































error: Content is protected !!
Scroll to Top