ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಸ್ ನಿಲ್ದಾಣದಲ್ಲಿ ಆ.2 ರಂದು ರಾತ್ರಿ ಆಟೋ ಚಾಲಕನ ಮೇಲೆ ಹಲ್ಲೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ. ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್(22) ಎಂಬಾತ ಹಿಂದೂ ಯುವತಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆ. 1 ರಂದು ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಾಗ, ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ಸುಮ್ನೆ ಬಿಡಲ್ಲ . ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕಾನೂನು ಕೈಗೆತ್ತಿಕೊಳ್ಳುವ ಅವಕಾಶ ಯಾರಿಗೂ ಇಲ್ಲ ಅನ್ನುವಂತಹ ಹೇಳಿಕೆ ನೀಡಿದ್ದರು. ಇದೀಗ ಹೇಳಿಕೆ ನೀಡಿದ ಬೆನ್ನಲ್ಲೆ ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ದಾಖಲಾಗಿದೆ.









































