ಉಳ್ಳಾಲ : ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡನೇ ದಿನದಂದೇ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಷ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರದ ಕೂಲಿ ಕಾರ್ಮಿಕ ಭಾಸ್ಕರ್ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬುಧವಾರ ಸುಶಾಂತ್ ಕಾಲೇಜಿಗೆ ಹೊರಡುವಾಗ ಪೋಷಕರು 500 ರೂ. ಕೊಟ್ಟಿದ್ದರು. ಗುರುವಾರ ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಸುಶಾಂತ್ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡ ಸುಶಾಂತ್ ಮನೆಯಲ್ಲೇ ಉಳಿದು ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾನೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾಕೆಟ್ ಮನಿ ಕೊಡದಕ್ಕೆ ಪೋಷಕರಲ್ಲಿ ಮುನಿಸು ! ಕಾಲೇಜು ಪ್ರವೇಶಿಸಿದ ಮರು ದಿನವೇ ವಿದ್ಯಾರ್ಥಿ ನೇಣಿಗೆ ಶರಣು









































