ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಕ್ರೈಸ್ಟ್‌ಕಿಂಗ್‌ನ ಬಾಲಕರ ಮತ್ತು ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಆ. 3 ರಂದು ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್‌ನ ಪ್ರಾಥಮಿಕ ವಿಭಾಗದ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಬಾಲಕರ ತಂಡದಲ್ಲಿ ರಾಯನ್ ಮಿರಾಂದ, ಗ್ಯಾಲ್ವಿನ್ ಜೋಯಲ್ ಪಿಂಟೊ (7ನೇ ತರಗತಿ), ಅಶ್ವಿನ್ (6ನೇ ತರಗತಿ) ಮತ್ತು ಗೌರವ್ (8ನೇ ತರಗತಿ) ಹಾಗೂ ಬಾಲಕಿಯರ ತಂಡದಲ್ಲಿ ಶಗುನ್ ವರ್ಮಾ, ಶೈನಿ ಡಿಸೋಜಾ (7ನೇ ತರಗತಿ) ಮತ್ತು ಖುಷಿ ಶೆಟ್ಟಿ (6ನೇ ತರಗತಿ) ಆಯ್ಕೆಯಾದ ವಿದ್ಯಾರ್ಥಿಗಳು. ಈ ತಂಡಗಳು ಉಡುಪಿ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಕಾರ್ಕಳ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.













































































error: Content is protected !!
Scroll to Top