ಬಾಲಕಿಗೆ ಕಿರುಕುಳ : ರಿಕ್ಷಾ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕಿರುಕುಳದಿಂದ ಹೆದರಿ ರಸ್ತೆ ಬದಿ ಮೂರ್ಚೆಹೋದ ಬಾಲಕಿ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬೂಬಕ್ಕರ್ ಸಿದ್ದಿಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಂದೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮೆಲ್ಕಾರ್ ಮಹಿಳಾ ಕಾಲೇಜಿನಿಂದ ಮನೆಗೆ ಹೋಗಲು ರಸ್ತೆ ಬದಿಯಲ್ಲಿ ಬಸ್‌ ಕಾಯುತ್ತಾ ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ಸಿದ್ದಿಕ್‌ ಬಾಲಕಿಗೆ ಕಿರುಕುಳ ನೀಡಿದ್ದಾನೆ. ಹೆದರಿದ ಬಾಲಕಿ ಮೂರ್ಚೆ ಹೋಗಿ ರಸ್ತೆ ಬದಿ ಬಿದ್ದಿದ್ದಾಳೆ. ಇದನ್ನು ನೋಡಿದ ಕಾಲೇಜಿನವರು ಮನೆಯವರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಬಾಲಕಿಯ ತಂದೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪರಿಣಾಮವಾಗಿ ಅವಳು ಹೆದರಿ ಮೂರ್ಚೆ ತಪ್ಪಿಬಿದ್ದಿದ್ಧಾಳೆ ಎಂದು ಆರೋಪಿಸಿದ್ದಾರೆ.
ರಿಕ್ಷಾ ಚಾಕನ ಬಾಲಕಿಗೆ ಮಾದಕವಸ್ತು ಬೆರೆಸಿದ ಚಾಕಲೇಟ್ ನೀಡಿದ್ದಾನೆ. ಈ ಚಾಕಲೇಟ್ ತಿಂದ ಬಾಲಕಿ ಮೂರ್ಚೆ ಹೋಗಿದ್ದಾಳೆ, ಅವಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂಬ ಸುದ್ದಿಯೊಂದು ಹರಡಿದ ಕೂಡಲೇ ಆಸ್ಪತ್ರೆಯಲ್ಲಿ ಜನ ಸೇರಿದ್ದರು. ಚಾಕಲೇಟನ್ನು ಪೋಲೀಸರು ವಶಕ್ಕೆ ಪಡದುಕೊಂಡು ಪರೀಕ್ಷೆ ನಡೆಸಿದ್ದಾರೆ. ಆದರೆ ಚಾಕಲೇಟ್ ಸೀಲ್ಡ್ ಆಗಿದ್ದು ಮಾದಕ ಚಾಕಲೇಟ್ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.













































































error: Content is protected !!
Scroll to Top