ಪ್ರತಿಭಟನಾ ಸಭೆಯಲ್ಲಿ ಸೌಜನ್ಯ ಕುಟುಂಬದವರ ಮೇಲೆ ಹಲ್ಲೆಗೆ ಯತ್ನ

ವೇದಿಕೆ ಹತ್ತಲು ಯತ್ನಿಸಿದ ಸೌಜನ್ಯ ತಾಯಿಯನ್ನು ತಡೆದ ಪೊಲೀಸರು

ಧರ್ಮಸ್ಥಳ : ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರವನ್ನು ಮತ್ತು ವೀರೇಂದ್ರ ಹೆಗ್ಗಡೆಯವರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿಸಿ ಆ. 4 ರಂದು ಧರ್ಮಸ್ಥಳ ಕ್ಷೇತ್ರದ ಸಿಬ್ಬಂದಿ ಮತ್ತು ಭಕ್ತರಿಂದ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಮುಂಭಾಗದ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ಈ ಪ್ರತಿಭಟನೆಯಲ್ಲಿ ಸಂತ್ರಸ್ತ ಯುವತಿ ಮೃತ ಸೌಜನ್ಯ ತಾಯಿ ಕುಸುಮಾವತಿ, ತಂಗಿ ಸೇರಿದಂತೆ ಅವರ ಕುಟುಂಬ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಜಸ್ಟೀಸ್ ಫಾರ್ ಸೌಜನ್ಯ ಭಿತ್ತಿಪತ್ರವನ್ನು ಹಿಡಿದು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಸೌಜನ್ಯ ತಾಯಿ ಕುಸುಮಾವತಿ ಅವರ ವಿರುದ್ಧವೇ ಧಿಕ್ಕಾರ ಕೂಗಿದ ಘಟನೆ ನಡೆದಿದೆ. ಈ ವೇಳೆ ಸೌಜನ್ಯ ಕುಟುಂಬಸ್ಥರನ್ನು ಸುತ್ತುವರಿದ ಪ್ರತಿಭಟನಾಕಾರರಲ್ಲಿ ಬಿಳಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಅಲ್ಲದೆ ಈ ವೇಳೆ ಕುಸುಮಾವತಿ ಮಗಳ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ವೇದಿಕೆ ಹತ್ತಲು ಮುಂದಾಗಿದ್ದು ಪೊಲೀಸರು ಅವರನ್ನು ತಡೆದಿದ್ದಾರೆ.





























































































































error: Content is protected !!
Scroll to Top