ವೀಡಿಯೋ ಪ್ರಕರಣದ ಎಸ್‌ಐಟಿ ತನಿಖೆ : ರಾಜ್ಯಪಾಲರಿಗೆ ಬಿಜೆಪಿ ಮನವಿ

ಗೃಹ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪ

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಮ್‌ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣವನ್ನು ವಿಶೇಷ ತನಖಾ ತಂಡದ ಮೂಲಕ ತನಿಖೆ ಮಾಡಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಬಿಜೆಪಿ ರಾಜ್ಯಪಲರಿಗೆ ಮನವಿ ಸಲ್ಲಿಸಿದೆ.
ಶುಕ್ರವಾರ ರಾಜ್ಯಪಾಲರ ಬಳಿ ಹೋದ ಬಿಜೆಪಿ ನಿಯೋಗ ಪ್ರಕರಣವನ್ನು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು. ಎಸ್‌ಐಟಿ ರಚಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಸಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ. ಗೃಹ ಸಚಿವರು ಉಡಾಫೆ ಉತ್ತರ ಕೊಡುತ್ತಿದ್ದಾರೆ. ಆರೋಪಿಗಳಿಗೆ ನಿಷೇಧಿತ ಸಂಘಟನೆಗಳ ಜತೆ ಸಂಪರ್ಕ ಇದೆ. ಈ ಎಲ್ಲ ಗಂಭೀರವಾದ ವಿಚಾರಗಳ ಬಗ್ಗೆ ತನಿಖೆಯಾಗಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್ ಸುವರ್ಣ, ವೇದವ್ಯಾಸ ಕಾಮತ್, ರಾಜೇಶ್ ನಾಯಕ್ ಸೇರಿದಂತೆ ಹಲವು ನಾಯಕರುಮನವಿ ಮಾಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಗೃಹ ಮಂತ್ರಿಗಳಿಗೆ ರಾಜ್ಯಪಾಲರು ಸೂಚನೆ ನೀಡಬೇಕೆಂದು ಎರಡೂ ಜಿಲ್ಲೆಗಳ ಜನಪ್ರತಿನಿಧಿಗಳು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.















































































































































error: Content is protected !!
Scroll to Top