ಕಲಬುರಗಿಯಲ್ಲಿ ಸಿದ್ದರಾಮಯ್ಯ, ಖರ್ಗೆ ಜಂಟಿಯಾಗಿ ಚಾಲನೆ
ಬೆಂಗಳೂರು : ಜನರು ಬಹುಕಾಲದಿಂದ ನಿರೀಕ್ಷಿಸುತ್ತಿರುವ ಗೃಹಜ್ಯೋತಿ ಯೋಜನೆಗೆ ಇಂದು ಕಲಬುರಗಿಯಲ್ಲಿ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡಲಾಗುತ್ತದೆ.
ಸರ್ವರ್ ಸಮಸ್ಯೆ ನಡುವೆಯೂ ಗೃಹ ಜ್ಯೋತಿ ಯೋಜನೆಗೆ ಕಳೆದ ಆರು ದಿನಗಳಲ್ಲಿ ಒಟ್ಟು 45.61 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.
200 ಯೂನಿಟ್ ಒಳಗೆ ವಿದ್ಯುತ್ ವೆಚ್ಚ ಮಾಡುವ ಗ್ರಾಹಕರಿಗೆ ಈ ಯೋಜನೆ ಲಭ್ಯವಾಗುತ್ತಿದ್ದು, ಉಚಿತ ಬೆಳಕು ಸುಸ್ಥಿರ ಬದುಕು ಎಂಬ ಘೋಷವಾಕ್ಯದೊಂದಿಗೆ ಗೃಹಜೋತಿ ಯೋಜನೆ ಅಧಿಕೃತವಾಗಿ ಜಾರಿಯಾಗಲಿದೆ.ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.
ಕಾಂಗ್ರೆಸ್ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಕುಟುಂಬಕ್ಕೆ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವುದಾಗಿ ಹೇಳಿತ್ತು. ಜುಲೈ ಒಂದರಿಂದಲೇ ಯೋಜನೆ ಜಾರಿಯಾಗಿದ್ದು, ಜುಲೈ ತಿಂಗಳ ಬಿಲ್ ಹಲವರಿಗೆ ಉಚಿತವಾಗಿ ಬಂದಿದೆ.






































































