ಪ್ರತಿಭಟನೆಯಲ್ಲಿ ಸೌಜನ್ಯಾ ಕುಟುಂಬದವರ ಮೇಲೆ ಹಲ್ಲೆ : ದೂರು ದಾಖಲು

ಉಜಿರೆಯಲ್ಲಿ ನಡೆದ ಸಭೆಯಲ್ಲಿ ಸಂಭವಿಸಿದ ಅನಪೇಕ್ಷಿತ ಘಟನೆ

ಧರ್ಮಸ್ಥಳ : ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ನೇತೃತ್ವದಲ್ಲಿ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಸೌಜನ್ಯಾ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಿನ್ನೆ ಉಜಿರೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಸೌಜನ್ಯಾ ತಾಯಿ ಕುಸುಮಾವತಿಯವರ ಸಹೋದರನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಈಗ ಪ್ರಕರಣ ದಾಖಲಾಗಿದೆ.
ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನಾ ಸಭೆಗೆ ಸೌಜನ್ಯಾ ತಾಯಿ ಮತ್ತು ಸೌಜನ್ಯಾ ತಂಗಿಯಂದಿರು ಆಗಮಿಸಿದ್ದರು. ಈ ವೇಳೆ ಸೌಜನ್ಯ ತಾಯಿ ನನಗೂ ವೇದಿಕೆ ಹತ್ತಬೇಕು ಎಂದು ಒತ್ತಾಯಿಸಿದಾಗ ಗಲಾಟೆಯಾಗಿದೆ. ಈ ವೇಳೆ ಹೆಗ್ಗಡೆ ಅನುಯಾಯಿಯೊಬ್ಬ ಪೋಲಿಸರ ಎದುರೇ ಸೌಜನ್ಯಾ ತಮ್ಮನ ಕಾಲರ್ ಹಿಡಿಯಲು ಪ್ರಯತ್ನಿಸಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸೌಜನ್ಯ ಸಂಬಂಧಿಕರನ್ನು ಸ್ಥಳದಿಂದ ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು.































































































































































error: Content is protected !!
Scroll to Top