ಉಗ್ರರ ಜತೆಗೆ ನಡೆದ ಗುಂಡಿನ ಕಾಳಗದಲ್ಲಿ ಮೃತ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ನಿಖರ ಮಾಹಿತಿ ಮೇರೆಗೆ ಪೊಲೀಸ್ ಮತ್ತು ಸೇನೆಯ ಜಂಟಿ ತಂಡ ಅರಣ್ಯ ಪ್ರದೇಶವನ್ನು ಸುತ್ತುವರಿದಿತ್ತು. ಈ ವೇಳೆ ಎನ್‌ಕೌಂಟರ್ ನಡೆಯಿತು. ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಾಯಗೊಂಡು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.
ಈ ಪ್ರದೇಶಕ್ಕೆ ಮತ್ತಷ್ಟು ಸೇನಾ ತಂಡಗಳು ಧಾವಿಸಲಾಗಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕುಲ್ಗಾಮ್‌ನ ಹಲಾನ್‌ನ ಎತ್ತರದ ಪ್ರದೇಶಗಳಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇಲೆ, ಭದ್ರತಾ ಪಡೆಗಳು ಶುಕ್ರವಾರ ಕಾರ್ಯಾಚರಣೆ ಪ್ರಾರಂಭಿಸಿವೆ.






































































