ಸುಳ್ಯ : ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡಿಯಲ್ಲಿ ನಡೆದಿದೆ. ಉಳುವಾರು ನಿವಾಸಿ ತೀರ್ಥರಾಮ ಮೃತಪಟ್ಟ ವ್ಯಕ್ತಿ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮೀನು ಸಾಗಿಸುತ್ತಿದ್ದ ಓಮಿನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ. ಈ ಬಗ್ಗೆ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

































