ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಉಪನಿರ್ದೆಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘ ಮತ್ತು ಗುರುಕೃಪ ಪದವಿ ಪೂರ್ವ ಕಾಲೇಜು ಬಲ್ಯೋಟ್ಟು ಇವರ ಸಹಯೋಗದಲ್ಲಿ ಆ.7ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಪ್ರೀಮಾ ಲೋಬೊ ಮತ್ತು ಒಂಬತ್ತನೇ ತರಗತಿಯ ಅಲೋಕ್ ಸಿ. ಶೆಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರನ್ನು ಶಾಲಾ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಮತ್ತು ಶಿಕ್ಷಕ ವೃಂದ ಹಾಗೂ ಕರಾಟೆ ಗುರು ಸತೀಶ್ ಬೆಳ್ಮಣ್ ಅಭಿನಂದಿಸಿದ್ದಾರೆ.

































































