ನಿಟ್ಟೆ – ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಂಜುನಾಥ ಶೆಟ್ಟಿ ನಿಧನ

ಕಾರ್ಕಳ : ನಿಟ್ಟೆ ಗರಡಿ ಬಳಿ ಆ. 7 ರಂದು ಕಾರು ಬೈಕ್‌ ನಡುವೆ ನಡೆದ ಅಫಘಾತದಲ್ಲಿ ಗಾಯಗೊಂಡಿದ್ದ ನಿಟ್ಟೆ ಗ್ರಾಮದ ಮಂಜುನಾಥ ಶೆಟ್ಟಿ ಅವರು ನಿಧನ ಹೊಂದಿದರು. ಮಂಜುನಾಥ ಶೆಟ್ಟಿಯವರು ಸಂಜೆ ಕೆಲಸ ಮುಗಿಸಿಕೊಂಡು ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದಾಗ ಅವಘಾತ ಸಂಭವಿಸಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಗಾಜ್ರೀಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದರು.
ಮಂಜುನಾಥ ಅವರು ನಿಟ್ಟೆ ಪರಪ್ಪಾಡಿ ಕ್ರಾಸ್ ನಿವಾಸಿಯಾಗಿದ್ದು, ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹಲವು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್‌) ಸಂಘದಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.







































































error: Content is protected !!
Scroll to Top