ಕಾರ್ಕಳ : ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿ ಉಡುಪಿಯ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಭಾಗವಾಗಿ ಉಚಿತ ಸ್ಪೋಕನ್ ಇಂಗ್ಲಿಷ್ ತರಗತಿಗಳು ಮಾಳ ಚೌಕಿಯಂಗಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಮಾಳ ಗ್ರಾಮ
ಪಂಚಾಯತ್ ಅಧ್ಯಕ್ಷೆ ರಕ್ಷಿತಾ ಶೆಟ್ಟಿಯವರು ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.
ಕಾರ್ಯಕ್ರಮ ನಿರ್ದೇಶಕ ಮನೋಜ್ ಕಡಬ ಪ್ರಾಸ್ತಾವಿಕವಾಗಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಪ್ರಥಮವಾಗಿ ಈ ಕಾರ್ಯಕ್ರಮ ಪ್ರಾ ರಂಭಿಸಿದ ಹೆಗ್ಗಳಿಕೆ ಈ ಶಾಲೆಗೆ ಸಲ್ಲುತಿದೆ ಎಂದರು. ತರಬೇತಿ ಪಡೆದ ಶಿಕ್ಷಕಿಯರಾದ ಉಷಾ ಹಾಗೂ ಶ್ರೇಯಾ
ಅನಿಸಿಕೆ ವ್ಯಕ್ತಪಡಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರನಾಥ ಇಂದ್ರ, ಉಪಾಧ್ಯಕ್ಷೆ ಮಂಜುಳಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶೋಧರ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಭುಜಂಗ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಪುಷ್ಪಾವತಿ ವಂದಿಸಿ, ಸಹ ಶಿಕ್ಷಕ ಸುಭಾಶ್ ಕಾರ್ಯಕ್ರಮ ನಿರೂಪಿಸಿದರು.
ಮಾಳ ಚೌಕಿಯಂಗಡಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ






































































