ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ

ತನ್ನ ಪಾಲಿನ ನೀರಿಗಾಗಿ ತಮಿಳುನಾಡು ಬಿಗಿಪಟ್ಟು

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ ಶುರುವಾಗಿದೆ. ಈ ಬಾರಿ ಮಳೆ ಕೊರತೆಯಾಗಿರುವುದರಿಂದ ಅಣೆಕಟ್ಟೆಗಳು ತುಂಬದಿದ್ದರೂ ತನ್ನ ಪಾಲಿನ ನೀರಿಗಾಗಿ ತಮಿಳುನಾಡು ಪಟ್ಟುಹಿಡಿದಿದ್ದು, ನಿನ್ನೆ ನಡೆದ ಸಭೆಯಲ್ಲಿ ಈ ವಿಚಾರವಾಗಿ ಮುನಿಸಿಕೊಂಡು ಟರ್ಧದಲ್ಲಿ ಎದ್ದು ನಡೆದಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗಿಲ್ಲ. ಆದ್ದರಿಂದ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸಂಕಷ್ಟ ಸೂತ್ರವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೆರಡೂ ಪಾಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ..
ರಾಜ್ಯದ ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದ ಜಲಾಶಯಗಳಲ್ಲಿ ನೀರಿಲ್ಲ. ಆದಾಗ್ಯೂ ತಮಿಳುನಾಡು ಸರ್ಕಾರ ಕಾವೇರಿ ನದಿ ನೀರು ಬಿಡುವಂತೆ ಮತ್ತೆ ಕ್ಯಾತೆ ಆರಂಭಿಸಿದೆ. ಈ ಬಗ್ಗೆ ನಮ್ಮ ತಜ್ಞರ ಜತೆಗೆ ಚರ್ಚೆ ಮಾಡಲಾಗುವುದು. ಸರಿಯಾಗಿ ಮಳೆಯಾಗದೇ ನಮಗೇ ತೊಂದರೆಯಾಗಿದೆ. ಕೇರಳ ಹಾಗೂ ಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದು, ನಮ್ಮ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಹೆಚ್ಚುವರಿ ನೀರು ಬಂದಾಗಲೆಲ್ಲಾ ಅಲ್ಲಿಗೆ ಹರಿಸುತ್ತಿದ್ದೆವು. ಈ ಬಾರಿ ಕೊಡಲಾಗಿಲ್ಲ. ನಾವು ಹೆಚ್ಚುವರಿ ನೀರು ಹರಿಸಿಲ್ಲವೆಂದು ತಮಿಳುನಾಡು ತಗಾದೆ ತೆಗೆದಿದೆ. ನಮ್ಮ ಪರಿಸ್ಥಿತಿ ಹಾಗೂ ಬೆಳೆಯನ್ನೂ ನೋಡಬೇಕಲ್ಲಾ ಎಂದಿದ್ದಾರೆ.





































































































































error: Content is protected !!
Scroll to Top