ಈಜು ಪಂದ್ಯಾಟ : ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಸೋಹನ್‌ ಗಿರೀಶ್ ಪಾಟೀಲ್‌ ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ : ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ 14ರ ವಯೋಮಿತಿಯ ಬಾಲಕರ ವಿಭಾಗದ ಈಜು ಸ್ಪರ್ಧೆಯಲ್ಲಿ ಎಕ್ಸಲೆಂಟ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸೋಹನ್‌ ಗಿರೀಶ್ ಪಾಟೀಲ್ (8ನೇ ತರಗತಿ) 50 ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭ 100ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿ ಸೋಹನ್ ತೃತೀಯ ಸ್ಥಾನ ಗಳಿಸಿದ್ದಾರೆ.
ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್‌ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.















































































error: Content is protected !!
Scroll to Top