ಹಲ್ಲಿ ಬಿದ್ದ ಆಹಾರ ಸೇವಿಸಿ 30 ವಿದ್ಯಾರ್ಥಿನಿಯರು ಅಸ್ವಸ್ಥ

ವಿಜಯಪುರ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಶಾಲೆಯಿಂದ ಬಂದ ಮೇಲೆ ಊಟ ಮಾಡಿದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾಸ್ಟೆಲ್‌ಗೆ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ನೀಡಲಾಗಿದ್ದು ಸದ್ಯ ಎಲ್ಲರ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಬಗ್ಗೆ ಹಾಸ್ಟೆಲ್ ವಾರ್ಡನ್, ಅಡುಗೆ ಸಿಬ್ಬಂದಿ ಜತೆಗೆ ಗ್ರಾಮಸ್ಥರು ವಾಗ್ವಾದ ನಡೆಸಿದ್ದು, ತಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.





































































































































error: Content is protected !!
Scroll to Top