ಮುಂದಿನ ವರ್ಷ ಎನ್‌ಇಪಿ ರದ್ದು : ಸಿದ್ದರಾಮಯ್ಯ

ಎನ್‌ಇಪಿ ಕೋಮುವಾದ ಕಲಿಸುತ್ತದೆ ಎಂದು ಆರೋಪ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಎನ್‌ಇಪಿ ರದ್ದು ಮಾಡುವ ಮೊದಲು ಕೆಲವು ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕೆ ಸಮಯಾವಕಾಶ ಸಿಕ್ಕಿರಲಿಲ್ಲ. ಚುನಾವಣೆಯ ನಂತರ ಸರ್ಕಾರ ರಚನೆಯಾದಾಗ, ಶೈಕ್ಷಣಿಕ ವರ್ಷ ಪ್ರಾರಂಭವಾಗಿತ್ತು.
ಏಕಾಏಕಿ ರದ್ದುಪಡಿಸಿದರೆ ಅದರಿಂದ ವಿದ್ಯಾರ್ಥಿಗಳ ಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಈ ಶೈಕ್ಷಣಿಕ ವರ್ಷದಲ್ಲಿ ಎನ್‌ಇಪಿ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.
ಎನ್‌ಇಪಿಗೆ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಮತ್ತು ಉಪನ್ಯಾಸಕರಿಂದ ತೀವ್ರ ವಿರೋಧವಿದ್ದು, ರಾಜ್ಯದಲ್ಲಿ ಪ್ರಾಯೋಗಿಕವಾಗಿ ಎನ್‌ಇಪಿ ಜಾರಿಗೊಳಿಸುವ ಮೂಲಕ ಬಿಜೆಪಿ ರಾಜ್ಯದ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಬಲಿಕೊಟ್ಟಿದೆ.
ವಿದ್ಯಾರ್ಥಿಗಳಿಗೆ ಕೋಮುವಾದದ ವಿಷಯಗಳನ್ನು ಕಲಿಸುವುದು ಎನ್‌ಇಪಿಯ ಉದ್ದೇಶವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯದ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.















































































































































error: Content is protected !!
Scroll to Top