ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಬ್ರಿಟಿಷರು ನಮ್ಮ ದೇಶದ ಸಂಪತ್ತನ್ನು ಹೊತ್ತೂಯ್ದರು. ಆದರೆ ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಸಂಪತ್ತು ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ, ಅಭಿವೃದ್ಧಿ ಸಾಧ್ಯವೆ? ಕುವೆಂಪು ಅವರು ತಮ್ಮದೊಂದು ಪದ್ಯದಲ್ಲಿ ಕತ್ತಿ ಪರದೇಶಿಯಾದರೆ ಮಾತ್ರ ನೋವೆ? ನಮ್ಮವರೆ ಹದಹಾಕಿ ತಿವಿದರದು ಹೂದೆ?” ಎಂದು ಪ್ರಶ್ನಿಸಿದ್ದಾರೆ. ಇದನ್ನೆಲ್ಲ ಮನಗಂಡೆ. ನಾವು ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ. ಅದಕ್ಕಾಗಿಯೇ ನಾವು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಪ್ರಮೇಯವಾದ ಅಭಿವೃದ್ಧಿಯ ಸ್ವಾತಂತ್ರ್ಯ ಎಂಬುದರಲ್ಲಿ ನಂಬಿಕೆಯಿಟ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸ್ವಾತಂತ್ರ್ಯವೇನೂ ಲಭಿಸಿತು. ಆದರೆ, ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲಿಯೇ ಶೇ.10ರಷ್ಟು ಜನ ಶೇ.78ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ ಯಜಮಾನಿಕೆ ಹೊಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದ್ದರು. ಧ್ವಜಾರೋಹಣದ ಬಳಿ ಸಿಎಂ ಅನುಮತಿ ಪಡೆದು ಡಿಕೆ ಶಿವಕುಮಾರ್ ಭಾಷಣ ಮಾಡಿದರು.
ಮಾಣಿಕ್ ಷಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ































