ಕಾರ್ಕಳ : ಕಡ್ತಲ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ. 17 ರಂದು ನಡೆಯಿತು. ಅಧ್ಯಕ್ಷರಾಗಿ ಸುಕೇಶ್ ಹೆಗ್ಡೆ ಕಡ್ತಲ, ಉಪಾಧ್ಯಕ್ಷರಾಗಿ ಲಕ್ಷ್ಮೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೈಲೂರು ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲ ನಾಗರಾಜ್ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
14 ಮಂದಿ ಸದಸ್ಯರಿರುವ ಕಡ್ತಲ ಗ್ರಾಮ ಪಂಚಾಯತ್‌ನಲ್ಲಿ 9 ಮಂದಿ ಬಿಜೆಪಿ, ಇಬ್ಬರು ಕಾಂಗ್ರೆಸ್ ಬೆಂಬಲಿತ ಹಾಗೂ ಮೂವರು ಪಕ್ಷೇತರ ಸದಸ್ಯರಿದ್ದಾರೆ. ಮೀಸಲಾತಿ ನಿಗದಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಬಿ) ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಒಲಿದಿತ್ತು.








































