ಎರ್ಲಪಾಡಿ ಗ್ರಾ. ಪಂ. ಅಧ್ಯಕ್ಷರಾಗಿ ಸುನಿಲ್‌ ಹೆಗ್ಡೆ, ಉಪಾಧ್ಯಕ್ಷರಾಗಿ ರೇಖಾ ಆಚಾರ್ಯ

ಕಾರ್ಕಳ : ಎರ್ಲಪಾಡಿ ಗ್ರಾಮ ಪಂಚಾಯತ್‌ ನೂತನ ಅಧ್ಯಕ್ಷರಾಗಿ ಸುನಿಲ್‌ ಹೆಗ್ಡೆ, ಉಪಾಧ್ಯಕ್ಷರಾಗಿ ರೇಖಾ ಆಚಾರ್ಯ ಆಯ್ಕೆಯಾಗಿದ್ದಾರೆ. ಗುರುವಾರದಂದು ಆಯ್ಕೆ ಪ್ರಕ್ರಿಯೆ ನಡೆದಿದ್ದು, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ. ವಿ. ಶ್ರೀನಿವಾಸ್‌ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

12 ಮಂದಿ ಸದಸ್ಯರಿರುವ ಎರ್ಲಪಾಡಿ ಗ್ರಾಮ ಪಂಚಾಯತ್‌ನಲ್ಲಿ 9 ಮಂದಿ ಬಿಜೆಪಿ ಹಾಗೂ ಮೂವರು ಪಕ್ಷೇತರ ಸದಸ್ಯರಿದ್ದಾರೆ. ಮೀಸಲಾತಿ ನಿಗದಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಒಲಿದಿತ್ತು. ಅಧ್ಯಕ್ಷ ಸ್ಥಾನಕ್ಕೆ ಸುನಿಲ್‌ ಹೆಗ್ಡೆ ಹಾಗೂ ಹರಿಪ್ರಸಾದ್ ನಾಯಕ್‌ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಬೆಂಬಲಿತ ಸುನಿಲ್‌ ಹೆಗ್ಡೆ 7 ಮತ ಹಾಗೂ ಹರಿಪ್ರಸಾದ್‌ 5 ಮತಗಳನ್ನು ಪಡೆದಿದ್ದಾರೆ. ಸುನಿಲ್‌ ಹೆಗ್ಡೆ 2 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇವರು ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ರೇಖಾ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.













































































error: Content is protected !!
Scroll to Top