ಬೆಂಗಳೂರು : ಉದ್ಯಾನ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಮೆಜೆಸ್ಟಿಕ್ ಬಳಿಕ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿ ದಟ್ಟವಾದ ಹೊಗೆ ಬರಲಾರಂಭಿಸಿ ಸುತ್ತಲೂ ಆವರಿಸಿದೆ. ಕೊನೆಗೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ.
ರೈಲು ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದು ಅಗ್ನಿ ಅವಘಡ ಸಂಭವಿಸಿ ರೈಲಿನ ಎರಡು ಕೋಚ್‌ಗಳಿಗೆ ಆವರಿಸಿ ತುಸು ಹೊತ್ತು ಪ್ರಯಾಣಿಕರು ಆತಂಕಗೊಂಡಿದ್ದರು.
ಬೆಂಗಳೂರು : ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ































