ಕಾರ್ಕಳ : ಕನ್ಯಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿವಪುರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ಇಲ್ಲಿನ ಹಳೆ ವಿದ್ಯಾರ್ಥಿ ವಿಶ್ವನಾಥ್ ನಾಯಕ್ ಬ್ಯಾಣ ಶಿವಪುರ ಅವರು 25 ಸಾವಿರ ರೂ. ಮೌಲ್ಯದ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕರಾದ ನಾರಾಯಣ ಅಡಿಗ, ಅಹಲ್ಯಾ, ಹೆಬ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನಾಯಕ್, ನರಸಿಂಹ ಪ್ರಭು ಬಾಯರ್ ಬೆಟ್ಟು, ಎಸ್ಡಿಎಂಸಿ ಸದಸ್ಯರಾದ ಶೇಖರ್ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಶ್ವೇತಾ ಉಪಸ್ಥಿತರಿದ್ದರು.






































