ಕಾರ್ಕಳ : ಮಾಳ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಉಮೇಶ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ವಿಮಲಾ ಎನ್. ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಶನಿವಾರದಂದು ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕಾರ್ಕಳ ಪುರಸಭೆಯ ಕಮ್ಯುನಿಟಿ ಎಫೈರ್ಸ್ ಆಫಿಸರ್ ಈಶ್ವರ ನಾಯ್ಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಮಾಳ ಗ್ರಾಮ ಪಂಚಾಯತ್‌ನಲ್ಲಿ 15 ಮಂದಿ ಸದಸ್ಯರಿದ್ದು ಎಲ್ಲರೂ ಬಿಜೆಪಿ ಬೆಂಬಲಿತರಾಗಿದ್ದಾರೆ. ಮೀಸಲಾತಿ ನಿಗದಿಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಒಲಿದಿತ್ತು.






























