ಕಾರ್ಕಳ : ರೆಂಜಾಳ ಗ್ರಾ. ಪಂ. ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಪುಷ್ಪಾ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ. 19 ರಂದು ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕ ಶಿವಾನಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

8 ಮಂದಿ ಸದಸ್ಯರಿರುವ ರೆಂಜಾಳ ಪಂಚಾಯತ್‌ನಲ್ಲಿ 7 ಮಂದಿ ಬಿಜೆಪಿ ಬೆಂಬಲಿತ ಹಾಗೂ ಓರ್ವರು ಕಾಂಗ್ರೆಸ್ ಬೆಂಬಲಿತರಿದ್ದಾರೆ. ಮೀಸಲಾತಿ ನಿಗದಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಕೆಟಗರಿಗೆ ಒಲಿದಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.


































