ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಚಾಲನೆ

ಸ್ಥಳ, ದಿನಾಂಕ ಎರಡೂ ಬದಲು

ಬೆಂಗಳೂರು: ಕಾಂಗ್ರೆಸ್‌ನ​ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕ ಬದಲಾಗಿದೆ.
ಆ.27ರ ಬದಲು 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಈ ಹಿಂದೆ ಬೆಳಗಾವಿಯಲ್ಲಿ ಆ.27ರಂದು ಆಯೋಜಿಸಲಾಗಿತ್ತು. ಇದೀಗ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಆ.30ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.ಾದರೆ ಬದಲಾವಣೆಗೆ ಕಾರಣ ಏನು ಎಂದು ಬಹಿರಂಗಪಡಿಸಿಲ್ಲ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆ ನಡೆಸಲು ಬೆಳಗಾವಿಗೆ ಭೇಟಿ ನೀಡಿದ್ದರು.ರಾಹುಲ್ ಗಾಂಧಿಗೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎನ್ನಲಾಗುತ್ತಿದೆ. ಯೋಜನೆಯನ್ನು ವಿವಿಧ ವಿಭಾಗಗಳಲ್ಲಿ ಚಾಲನೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೆಬ್ಬಾಳ್ಕರ್ ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ. ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರೆ, ಅನ್ನ ಭಾಗ್ಯ ಯೋಜನೆಯನ್ನು ಶೀಘ್ರದಲ್ಲೇ ಬೆಳಗಾವಿಯಲ್ಲಿ ಉದ್ಘಾಟಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

































































error: Content is protected !!
Scroll to Top