ಜಿಂಬಾಬ್ವೆ ಮಾಜಿ ಕ್ಯಾಪ್ಟನ್‌ ಹೀತ್ ಸ್ಟ್ರೀಕ್ ನಿಧನ

49ರ ಹರೆಯದಲ್ಲೇ ಕ್ಯಾನ್ಸರ್‌ಗೆ ಬಲಿಯಾದ ಕ್ರಿಕೆಟಿಗ

ಹರಾರೆ : ಜಿಂಬಾಬ್ವೆ ಕ್ರಿಕೆಟ್‌ ತಂಡದ ಮಾಜಿ ನಾಯಕ ಮತ್ತು ಅನುಭವಿ ಆಲ್‌ರೌಂಡರ್ ಹೀತ್ ಸ್ಟ್ರೀಕ್ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು 49ರ ಹರೆಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಜಿಂಬಾಬ್ವೆ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 65 ಟೆಸ್ಟ್ ಮತ್ತು 189 ಏಕದಿನ ಪಂದ್ಯಗಳನ್ನು ಆಡಿದ್ದ ಸ್ಟ್ರೀಕ್ ಲಿವರ್ ಕ್ಯಾನ್ಸರ್‌ಗೆ ತುತ್ತಾಗಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್ ಮತ್ತು ಆಲ್‌ರೌಂಡರ್ ಆಗಿದ್ದ ಹೀತ್ ಸ್ಟ್ರೀಕ್ ಟೆಸ್ಟ್ ಕ್ರಿಕೆಟ್‌ನಲ್ಲಿ 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಅವಧಿಯಲ್ಲಿ 16 ಬಾರಿ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಹಾಗೂ 7 ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.





























































































































error: Content is protected !!
Scroll to Top