ಸೆ.10ರ ವರೆಗೆ ಪಡಿತರ ಕಾರ್ಡ್‌ ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನಾಂಕವನ್ನು ನೀಡಲಾಗಿತ್ತು. ಆದರೆ ಹಲವೆಡೆ ಸರ್ವರ್‌ ಸಮಸ್ಯೆಯ ಕಾರಣದಿಂದ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೆ ಮನೆಗೆ ತೆರಳಿದ್ದರು.
ಇದೀಗ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್‌ 1 ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ.



























































































































error: Content is protected !!
Scroll to Top