ಮಂಗಳೂರು : ಯುವಕನೊಬ್ಬ ವೀಡಿಯೋ ಮಾಡಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ಮಂಗಳವಾರ ಸಂಭವಿಸಿದೆ.
ಪುತ್ತೂರಿನ ಕಟ್ಟತ್ತಾರು ಸಮೀಪದ ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನಾಗಿದ್ದ ಅಬ್ದುಲ್ ನಾಸಿರ್ ಮಾಲಕರು ತನಗೆ ಹಲ್ಲೆ ಮಾಡಿದ್ದಾರೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ






























































