ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಭೇಟಿ
ಬೆಂಗಳೂರು : ಚಂದ್ರಯಾನ-3 ಮಿಷನ್ ಅನ್ನು ಯಶಸ್ವಿಯಾಗಿಸಿರುವ ವಿಜ್ಞಾನಿಗಳನ್ನು ಅಭಿನಂದಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಶನಿವಾರ ಇಸ್ರೊಗೆ ನೀಡಲಿದ್ದಾರೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಇಳಿಯುವ ದಿನ ಮೋದಿ ಬ್ರಿಕ್ಸ್ ಶೃಂಗದಲ್ಲಿ ಭಾಗವಹಿಸುವ ಸಲುವಾಗಿ ಜೋಹಾನ್ಸ್‌ಬರ್ಗ್‌ನಲ್ಲಿದ್ದರು. ಅಲ್ಲಿಂದಲೇ ಚಂದ್ರಯಾನ ಲ್ಯಾಂಡಿಂಗ್ ವೀಕ್ಷಿಸಿದ ಬಳಿಕ ವರ್ಚುವಲ್ ಆಗಿ ಮಾತನಾಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದರು. ಈ ಸಂದರ್ಭ ಭಾರತಕ್ಕೆ ಹಿಂದಿರುಗಿದ ಕೂಡಲೇ ಖುದ್ದಾಗಿ ಬಂದು ಅಭಿನಂದಿಸುವುದಾಗಿ ಹೇಳಿದ್ದರು. ಆ ಪ್ರಕಾರ ನಾಳೆ ಬೆಂಗಳೂರಿನಲ್ಲಿರುವ ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ ಎಚ್‌ಎಎಲ್ ಹೆಲಿಪ್ಯಾಡ್‌ನಲ್ಲಿ ಇಳಿದು ಅಲ್ಲಿಂದ ರಸ್ತೆ ಮೂಲಕ ಪೀಣ್ಯದಲ್ಲಿರುವ ಇಸ್ರೊ ಕೇಂದ್ರಕ್ಕೆ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ. ಮೋದಿಯ ಅಗಮನಕ್ಕಾಗಿ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 4.30ರಿಂದ ಬೆಳಗ್ಗೆ 9.30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ.





























































