ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ
ವಯನಾಡು : ಕೇರಳದ ವಯನಾಡು ಜಿಲ್ಲೆಯ ಮಾನಂದವಾಡಿಯಲ್ಲಿ ಶುಕ್ರವಾರ ಜೀಪ್ 25 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಹನ ತೋಟದಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ತಲಪ್ಪುಳದ ಕಣ್ಣೋತ್ಮಾಲಾ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ವಯನಾಡು ಜಿಲ್ಲೆಯವರು. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಸಮಯದಲ್ಲಿ ಚಾಲಕ ಸೇರಿದಂತೆ ಒಟ್ಟು 13 ಜನರು ಜೀಪ್ನಲ್ಲಿ ಇದ್ದರು. ಈ ಪೈಕಿ
ಹೆಚ್ಚಿನವರು ಮಹಿಳೆಯರು.
ಜೀಪ್ ಕನ್ನಮಾಳದ ಕಡಿದಾದ ತಿರುವಿನಲ್ಲಿ ಮೋರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಬಂಡೆಗಳಿಂದ ತುಂಬಿದ ಕಮರಿಗೆ ಬಿದ್ದಿದೆ. ಜೀಪು ಸಂಪೂರ್ಣ ಜಖಂಗೊಂಡಿದೆ. ಅರಣ್ಯ ಸಚಿವ ಎ ಕೆ ಶಸೀಂದ್ರನ್ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಯನಾಡ್ ಸಂಸದ ರಾಹುಲ್ ಗಾಂಧಿ ಭೀಕರ ಅಪಘಾತಕ್ಕೆ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.






























































