ಕಾರ್ಕಳ ಬೋರ್ಡ್‌ ಹೈಸ್ಕೂಲ್‌ : ಆರೋಗ್ಯ ಅರಿವು ಕಾರ್ಯಕ್ರಮ

ಕಾರ್ಕಳ : ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ‌ (ಬೋರ್ಡ್‌ ಹೈಸ್ಕೂಲ್)ದಲ್ಲಿ ಇತ್ತೀಚೆಗೆ ಆರೋಗ್ಯ ಅರಿವು ಕಾರ್ಯಕ್ರಮ ಜರುಗಿತು. ತಾಲೂಕು ಸರಕಾರಿ ಆರೋಗ್ಯ ಕೇಂದ್ರದ ಆಯುರ್ವೇದ ವಿಭಾಗದ ವೈದ್ಯೆ ಡಾ. ರೇಷ್ಮಾ ಪೈ, ಮಲೇರಿಯಾ, ಡೆಂಗ್ಯೂ ಸೇರಿದಂತೆ ವಿವಿಧ ರೋಗಗಳ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಚಿಕಿತ್ಸೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆ ಪ್ರಮೀಳಾ ಈ ಸಂದರ್ಭ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ನಾಗರಾಜ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ಕಾರ್ಯಕ್ರಮ ನಿರ್ವಹಿಸಿದರು.































































































error: Content is protected !!
Scroll to Top