ಚಿಕ್ಕಮಗಳೂರು: ಮಳೆಯಿಲ್ಲದೆ ಈರುಳ್ಳಿ ಬೆಳೆ ನಾಶಗೊಂಡಿರುವ ಕಾರಣ ರೈತರೊಬ್ಬರು ತನ್ನ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಸತೀಶ್ (49) ನೇಣಿಗೆ ಶರಣಾದ ರೈತ.
ಸತೀಶ್ ಸಾಲ ಮಾಡಿ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಮಳೆ ಬಾರದ ಹಿನ್ನೆಲೆ ಉಂಟಾದ ಬರಕ್ಕೆ ಈರುಳ್ಳಿ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿದ್ದರಿಂದ ಮನನೊಂದ ಜಮೀನಿನಲ್ಲೇ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬರದಿಂದ ಕಂಗೆಟ್ಟು ರೈತ ಆತ್ಮಹತ್ಯೆ


























