ಕಾರ್ಕಳ : ಪಳ್ಳಿ- ನಿಂಜೂರು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆ. 31 ರಂದು ನಡೆಯಿತು. ಕಾರ್ಕಳದ ಪ್ರಸಾದ ಭಟ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಹಿಳಾ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಪಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆ ಉಷಾ ಅಂಚನ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಆನಂದ ಎಸ್. ಪೂಜಾರಿ, ಕಾರ್ಯದರ್ಶಿ ವಿಜಯ ಪೂಜಾರಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಪಳ್ಳಿ – ನಿಂಜೂರು ಬಿಲ್ಲವ ಸಂಘದಲ್ಲಿ ನಾರಾಯಣ ಗುರು ಜಯಂತಿ






























































