ಆಕ್ಷೇಪಾರ್ಹ ಪೋಸ್ಟ್‌ : ಎರಡು ಪ್ರಕರಣ ದಾಖಲು

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌

ಧರ್ಮಸ್ಥಳ : ಸೌಜನ್ಯಾ ಪ್ರಕರಣದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೋಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಾಕಿದ್ದಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಬಂಟ್ವಾಳ ತಾಲೂಕಿನ ವ್ಯಕ್ತಿಯೊಬ್ಬ ಸಾಮಾಜಿಕ ಫೇಸ್‌ಬುಕ್‌ನಲ್ಲಿ ಸೌಜನ್ಯಾ ತಾಯಿ ಕುಸುಮಾವತಿ ಬಗ್ಗೆ ಆಕ್ಷೇಪಾರ್ಹ ಬರವಣಿಗೆ ಹಾಕಿರುವುದು ಕಂಡು ಬಂದಿದೆ.
ಈ ಬಗ್ಗೆ ಆ. 28ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬದವರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವ ಬಗ್ಗೆ ಸುರೇಶ್‌ ರಾಜ್‌ ಎಂಬವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈತ ಆಕ್ಷೇಪಾರ್ಹ ಬರಹಗಳನ್ನು ಹಾಕಿರುವುದಾಗಿ ಆರೋಪಿಸಲಾಗಿದೆ.





























































































































error: Content is protected !!
Scroll to Top