ಫುಟ್‌ಬೋರ್ಡ್ ಪ್ರಯಾಣಿಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ
ಮಂಗಳೂರು : ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಕಂಡಕ್ಟರ್ ಮೃತಪಟ್ಟ ಘಟನೆಯ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಫುಟ್‌ಬೋರ್ಡ್ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲು ತೊಡಗಿದ್ದಾರೆ. ಗುರುವಾರ ಒಂದೇ ದಿನ ಮಂಗಳೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ.
ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್‌ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಇನ್ನು ಮುಂದಕ್ಕೆ ಯಾರಾದರೂ ಫುಟ್‌ಬೋರ್ಡ್‌ನಲ್ಲಿ ನಿಂತಿರುವುದು ಕಂಡುಬಂದರೆ ಬಸ್ ಮುಂದಕ್ಕೆ ಕೊಂಡೊಯ್ಯಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬಾಗಿಲು ಹೊಂದಿರುವ ಬಸ್‌ಗಳು ಇನ್ನೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು ಹಾಗೂ ಬಾಗಿಲನ್ನು ಸಂಚಾರದ ಸಮಯದಲ್ಲಿ ಮುಚ್ಚಿರಬೇಕೆಂದು ಎಂದು ಪೊಲೀಸರು ತಿಳಿಸಿದ್ದಾರೆ. ಫುಟ್‌ಬೋರ್ಡ್‌ನಲ್ಲಿ ಯಾರಾದರು ನಿಂತಿದ್ದರೆ, ಹಾಗೂ ಬಾಗಿಲು ಮುಚ್ಚದೇ ಇದ್ದರೆ ಬಸ್ ಸಂಚರಿಸಬಾರದೆಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.






























































