ಮುದ್ರಾಡಿಯಲ್ಲಿ ತಾಲೂಕು ಮಟ್ಟದ ತ್ರೋಬಾಲ್‌ ಪಂದ್ಯಾಟ

ಹೆಬ್ರಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮುದ್ರಾಡಿ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋ ಬಾಲ್ ಪಂದ್ಯಾಟ ಮುದ್ರಾಡಿ ಶಾಲಾ ವಠಾರದಲ್ಲಿ ಸೆ.1ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುದ್ರಾಡಿ ಗ್ರಾ. ಪಂ. ಅಧ್ಯಕ್ಷೆ ವಸಂತಿ ಪೂಜಾರಿ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಪಂದ್ಯಾಟದಲ್ಲಿ ಸೋಲು ಗೆಲವು ಇದ್ದದ್ದೇ. ಎಲ್ಲರೂ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಎಂದು ಶುಭ ಹಾರೈಸಿದರು. ಪಂದ್ಯಾಟವನ್ನು ಮುದ್ರಾಡಿ ಗ್ರಾ. ಪಂ. ಮಾಜಿ ಅಧ್ಯಕ್ಷ ಮಂಜುನಾಥ ಹೆಗ್ಡೆ ಉದ್ಘಾಟಿಸಿದರು. ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ರವಿಚಂದ್ರ ಕಾರಂತ್ ಪಂದ್ಯಾಟದ ನೇತೃತ್ವ ವಹಿಸಿದ್ದರು.

ಮುದ್ರಾಡಿ ಗ್ರಾ. ಪಂ. ಉಪಾಧ್ಯಕ್ಷೆ ರಮ್ಯಕಾಂತಿ, ಸದಸ್ಯರಾದ ಶಾಂತ ದಿನೇಶ್ ಪೂಜಾರಿ, ಸನತ್ ಕುಮಾರ್, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೆಬ್ರಿ ಶಾಖೆ ಅಧ್ಯಕ್ಷ ಹರೀಶ್ ಪೂಜಾರಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಅಣ್ಣಪ್ಪ, ಸಿ. ಆರ್. ಪಿ. ಕೃಷ್ಣರಾಜ್ ಭಟ್, ಶಿಕ್ಷಣ ಸಂಯೋಜಕ ಪ್ರಕಾಶ್ ಸರ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ ಆಚಾರ್ಯ, ಉಡುಪಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಆನಂದ ಪೂಜಾರಿ, ಕ.ರಾ.ಶಾಲಾ.ಶಿ. ಸಂಘದ ಸಂಘಟನಾ ಕಾರ್ಯದರ್ಶಿ ರಂಜಿತಾ ದಾನಿ ರಜತ್ ಶೆಟ್ಟಿ, ವಾರಿಜ ಶೆಡ್ತಿ ಮತ್ತು ಪುಷ್ಯರಾಗ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

ಮುದ್ರಾಡಿ ಗ್ರಾ. ಪಂ. ವತಿಯಿಂದ ಪಂದ್ಯಾಟಕ್ಕೆ ನೀಡಿದ ರೂ. 10000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಶುಭಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಭಂಡಾರಿ ಸ್ವಾಗತಿಸಿ, ಶಿಕ್ಷಕ ಸತೀಶ್ ಬೆಳಂಜೆ ನಿರೂಪಿಸಿ, ಶಿಕ್ಷಕಿ ಸುಮಲತಾ ವಂದಿಸಿದರು.error: Content is protected !!
Scroll to Top