ಕಾರ್ಕಳ : ಮರ್ಣೆ ವ್ಯವಸಾಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಭವಾನಿ ಶಂಕರ್(60) ಅವರು ನಿನ್ನೆ ತಡರಾತ್ರಿ ದೀರ್ಘಕಾಲದ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕಳೆದ ಸುಮಾರು ಒಂದು ವರ್ಷದಿಂದ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು.
ಅವರು ಮೂರು ಅವಧಿಗೆ ಮರ್ಣೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘದ ಅಭ್ಯುದಯಕ್ಕೆ ಅಪಾರವಾಗಿ ಶ್ರಮಿಸಿದ್ದರು. ಇದಕ್ಕೂ ಮೊದಲು ಉಪಾಧ್ಯಕ್ಷರಾಗಿದ್ದರು. ಆರಂಭದಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿ ಬಳಿಕ ಬಿಜೆಪಿ ಸೇರಿ ಜನಾನುರಾಗಿಯಾಗಿದ್ದರು. ಹೆರ್ಮುಂಡೆ ಮಹಾವಿಷ್ಣುಮೂರ್ತಿ ದೇವಸ್ಥಾ ಸೇವಾ ಸಮಿತಿ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವು ಸಾಮಾಜಿಕ, ಧಾರ್ಮಿಕ ಸಂಘಟನೆಗಳನ್ನು ಮುನ್ನಡೆಸಿದ್ದರು.
ಮರ್ಣೆ ವ್ಯವಸಾಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಭವಾನಿ ಶಂಕರ್ ನಿಧನ
