ಬಿಜೆಪಿ ಲೀಡರ್ ಲೆಸ್ ಪಾರ್ಟಿ :​ ಜಗದೀಶ್ ಶೆಟ್ಟರ್ ಲೇವಡಿ

ಗದಗ : ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಬಿಜೆಪಿ ಟಿಕೆಟ್​​ ಕೊಟ್ಟರು. ಬೈಂದೂರು ಸುಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಿದರು. ಇವೆಲ್ಲಾ ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, ನಿರ್ಧಾರವಾದಾಗ ಹೆಸರು ಹೇಳುತ್ತೇನೆ ಎಂದರು.

40-45 ಶಾಸಕರು ಸಂಪರ್ಕದಲ್ಲಿದ್ದಾರೆಂದು ಬಿ.ಎಲ್.ಸಂತೋಷ್ ಹೇಳಿಕೆ ವಿಚಾರವಾಗಿ ಅವರು ಮಾತನಾಡಿ, ಈಗ ಬಿ.ಎಲ್​. ಸಂತೋಷ್ ಅವರೇ ಸ್ಪಷ್ಟೀಕರಣ ಕೊಡಬೇಕು.​ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಚೀಟಿ ಮೂಲಕವಾದರೂ ತಾತ್ಕಾಲಿಕ ವಿಪಕ್ಷ ನಾಯಕರ ಆಯ್ಕೆ ಮಾಡಿ ಎಂದರು.

ಸರಕಾರ ರಚಿಸಿ 100 ದಿನವಾದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಸೋಚನೀಯ ಪರಿಸ್ಥಿತಿಯಲ್ಲಿದೆ ಅನ್ನೋದನ್ನ ಅರ್ಥಮಾಡಿಕೊಳ್ಳಬೇಕು. ರಾಜ್ಯ ಬಿಜೆಪಿ ಕೆಲವರ ಮುಷ್ಟಿಯಲ್ಲಿದೆ, ಹೀಗಾಗಿ ಸುಧಾರಣೆಯಾಗಿಲ್ಲ ಎಂದು ಕಿಡಿಕಾರಿದರು. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ವಿಚಾರವಾಗಿ ಮಾತನಾಡಿದ ಅವರು, ಎಂಪಿಗೆ ಯಾರು ನಿಲ್ಲಬೇಕು ಅನ್ನೋದನ್ನ ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.

ಒನ್‌ ನೇಷನ್‌, ಒನ್‌ ಎಲೆಕ್ಷನ್‌ ಸಾಧ್ಯವಿಲ್ಲ
ಭಾರತ ದೊಡ್ಡ ದೇಶ, ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ವ್ಯವಸ್ಥೆಯಿದೆ. ದೇಶಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ಸಾಧ್ಯವಿಲ್ಲ. ಕಳೆದ 5 ವರ್ಷಗಳಿಂದ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 9 ವರ್ಷ 3 ತಿಂಗಳು ಕಳೆದಿದೆ. ಇನ್ನೆಂಟು ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿದೆ. ಈಗ ಕಮಿಟಿ ಮಾಡಿದ್ದು ಯಾಕೆ ಎಂದು ನನಗೆ ಅರ್ಥವಾಗುತ್ತಿಲ್ಲ. ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ ಇದು ಸಾಧ್ಯವಿಲ್ಲ ಎಂದರು.

error: Content is protected !!
Scroll to Top